ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಹಿಂದೆ ರಾಜಕೀಯ ಉದ್ದೇಶವಿಲ್ಲ: ಎನ್ ಎಸ್ ಬೋಸರಾಜು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪದೇಪದೆ ಆರೋಪಗಳನ್ನು ಮಾಡುತ್ತಿರುವ ಹೆಚ್ ಡಿ ಕುಮಾರಸ್ವಾಮಿಯವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯಿಲ್ಲ, ಅವರು ಹಿಟ್ ಅಂಡ್ ರನ್ ಕೇಸ್, ಸುಳ್ಳು ಹೇಳುತ್ತಾ ದ್ವೇಷದ ರಾಜಕಾರಣ ನಡೆಸುವುದೇ ತಂದೆ ಮಗನ ಕಾಯಕ ಎಂದು ಬೋಸರಾಜು ಹೇಳಿದರು.
ರಾಯಚೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವ ನಿರ್ಧಾರದ ಹಿಂದೆ ಯಾವುದೇ ರಾಜಕೀಯ ಉದ್ದೇಶ ಅಡಗಿಲ್ಲ, ಜಮೀರ್ ಅಹ್ಮದ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೆನ್ನುವ ಕಾರಣಕ್ಕೆ ಶಿಫ್ಟ್ ಮಾಡಲಾಗಿದೆ ಅನ್ನೋದು ತಪ್ಪು, ಬೆಂಗಳೂರು ಸೆಂಟ್ರಲ್ ಜೈಲಲ್ಲಿ ದರ್ಶನ್ ಗೆ ವಿಶೇಷ ಸವಲತ್ತುಗಳು ಸಿಗುತ್ತಿದ್ದವು ಅಂತ ದೂರುಗಳು ಕೇಳಿಬಂದ ಕಾರಣ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಗೆ ಆರ್ಥಿಕ ಸಂಕಷ್ಟ? ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದು ಮನವಿ
Latest Videos