ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್ ರಾಜಣ್ಣ ಖಡಕ್ ಮಾತು
ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯನವರು 2028ರಲ್ಲೂ ಮುಖ್ಯಮಂತ್ರಿ ಆಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಕಾರ್ಯಕ್ರಮದಿಂದ ರಾಜ್ಯದಲ್ಲಿ ಯಾರೂ ಉಪವಾಸ ಇರಲಿಲ್ಲ ಎಂದು ರಾಜಣ್ಣ ಶ್ಲಾಘಿಸಿದರು. ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದಿದ್ದಾರೆ.
ಬೆಂಗಳೂರು, ಜನವರಿ 06: ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ, ಹೆಚ್.ಡಿ.ದೇವೇಗೌಡರು ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೆಯೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ, ಶ್ರೇಯಸ್ಸು ಲಭಿಸಲಿ. 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
