AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 4 ರ ನಂತರ ಕಾಂಗ್ರೆಸ್ ರಾಷ್ಟೀಯ ಮಟ್ಟದಲ್ಲಿ ಎರಡು ಹೋಳಾದರೆ ಆಶ್ಚರ್ಯವಿಲ್ಲ: ಬಸವರಾಜ ಬೊಮ್ಮಾಯಿ

ಜೂನ್ 4 ರ ನಂತರ ಕಾಂಗ್ರೆಸ್ ರಾಷ್ಟೀಯ ಮಟ್ಟದಲ್ಲಿ ಎರಡು ಹೋಳಾದರೆ ಆಶ್ಚರ್ಯವಿಲ್ಲ: ಬಸವರಾಜ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 21, 2024 | 12:29 PM

Share

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ಕಲಬುರಗಿ: ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ (Basavaraj Bommai) ಜೂನ್ 4 ರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ (CM) ಮತ್ತು ಉಪ ಮುಖ್ಯಮಂತ್ರಿ (DCM) ನಡುವಿನ ಆಂತರಿಕ ಗುದ್ದಾಟ ಮತ್ತು ಉಳಿದ ಸಚಿವರು ಹಾಗೂ ಶಾಸಕರಲ್ಲಿ ಮಡುಗಟ್ಟಿರುವ ಅಸಮಾಧಾನಗಳಿಂದಾಗಿ ಉರುಳಲಿದೆ ಎಂದು ಹೇಳಿದರು. ಚುನಾವಣಾ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗಳನ್ನು ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೊಟಿ ತೀವ್ರಗೊಂಡಿರುವುದು ಸ್ಪಷ್ಟವಾಗುತ್ತದೆ. ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ, ಅದರ ಜೊತೆಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾನೂನು ಪ್ರಕಾರ ಇದ್ದರೆ ಭಯವೇಕೆ?: ಸಿಎಂ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು