ಮುಡಾ ಹಗರಣ; ಸಿಎಂ ಸಿದ್ದರಾಮಯ್ಯರಿಂದ ಯಾವ ಪ್ರಮಾದವೂ ಜರುಗಿಲ್ಲ: ಡಿಕೆ ಶಿವಕುಮಾರ್

|

Updated on: Aug 29, 2024 | 6:32 PM

ಹೆಚ್ ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಅಂತ ಮಾಡಿರುವ ಅರೋಪಕ್ಕೆ ಉತ್ತರಿಸಿದ ಶಿವಕುಮಾರ್ ನಕಲಿಗಳು ಕೇಳುವ ಪ್ರಶ್ನೆಗಳಿಗೆಲ್ಲ ತಾನು ಪ್ರತಿಕ್ರಿಯೆ ನೀಡಲ್ಲ, ಅಸಲಿಗಳು ಹೇಳಿದ್ದೇನಾದರೂ ಇದ್ರೆ ಹೇಳಿ ಅಂದರು.

ಹಾಸನ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿರದ ಕಾರಣ ಸಮಸ್ಯೆ ಎದುರಾಗುವ ಪ್ರಶ್ನೆ ಉದ್ಭವಿಸಲ್ಲ, ಅವರ ಜಮೀನನ್ನು ಮುಡಾ ಸ್ವಾಧೀನಪಡಿಸಿಕೊಂಡಿದೆ ಮತ್ತು ಆಗ ಆಡಳಿತ ನಡೆಸುತ್ತಿದ್ದ ಬಿಜೆಪಿ ಸರ್ಕಾರ ಸಿಎಂ ಅವರಿಗೆ ಬದಲೀ ನಿವೇಶನಗಳನ್ನು ನೀಡಿದೆ. ಇದರಲ್ಲಿ ಕಾನೂನು ಉಲ್ಲಂಘನೆ ಪ್ರಶ್ನೆ ಎಲ್ಲಿಂದ ಬಂತು? ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಕ್ರಮ ಅಸ್ತಿ ಕೇಸ್: ಸಿಬಿಐ, ಯತ್ನಾಳ್ ಅರ್ಜಿ ವಜಾ, ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್