ಸಚಿವ ಡಾ. ಕೆ ಸುಧಾಕರ್ ರೂ. 15,000 ಕೋಟಿ ಲೂಟಿ ಮಾಡಿದ ಬಗ್ಗೆ ಯಾರೂ ಮಾತಾಡಲಿಲ್ಲ: ಹೆಚ್ ವಿಶ್ವನಾಥ್

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Mar 08, 2023 | 2:59 PM

ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ವಿಶ್ವನಾಥ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿ, ಅವನು ರೂ. 15,000 ಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದ್ರಾ ಅಂತ ಕೇಳಿದರು.

ಬೆಂಗಳೂರು: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (H Vishwanath) ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿರುವ ವಿಷಯ ಜಗಜ್ಜಾಹೀರಾಗಿದೆ. ಅದು ಸರಿ, ಅವರು ಪ್ರತಿದಿನ ಒಬ್ಬೊಬ್ಬ ಬಿಜೆಪಿ ನಾಯಕ (BJP leaders) ಮೇಲೆ ಹರಿಹಾಯುವುದು ಯಾಕೆ ಅಂತ ಕನ್ನಡಿಗರಿಗೆ ಅರ್ಥವಾಗುತ್ತಿಲ್ಲ. ಪಕ್ಷದಲ್ಲಿರುವಾಗ ಅವರು ಯಾರ ಬಗ್ಗೆಯೂ ಮಾತಾಡುತ್ತಿರಲಿಲ್ಲ. ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ವಿಶ್ವನಾಥ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರನ್ನು ಟಾರ್ಗೆಟ್ ಮಾಡಿ, ಅವನು ರೂ. 15,000 ಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದ್ರಾ ಅಂತ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 08, 2023 01:32 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.