ಬಿಗ್ ಬಾಸ್​ನಿಂದ ಹೊರಬಂದು ಆ ಆರೋಪವನ್ನು ತಳ್ಳಿ ಹಾಕಿದ ಮಲ್ಲಮ್ಮ

Updated on: Nov 03, 2025 | 1:00 PM

ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಿಂದ ಹೊರ ಬಂದಿದ್ದಾರೆ. ಅವರು ಉತ್ತಮವಾಗಿ ಆಡಿದರೂ ಐದನೇ ವಾರಕ್ಕೆ ಹೊರಗೆ ಬರಬೇಕಾದ ಅನಿವಾರ್ಯತೆ ಎದುರಾಯಿತು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಮಲ್ಲಮ್ಮ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ .

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಐದನೇ ವಾರದ ಎಲಿಮಿನೇಷನ್​ನಲ್ಲಿ ಮಲ್ಲಮ್ಮ ಅವರು ಔಟ್ ಆಗಿದ್ದಾರೆ. ಅವರು ಹೊರ ಬಂದ ಬಳಿಕ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ದೊಡ್ಮನೆಯಲ್ಲಿ ಅವರಿಗೆ ಅನೇಕರು ಆಟ ಆಡೋಕೆ ಬಿಟ್ಟಿಲ್ಲ. ಹಿರಿಯರು ಎಂಬ ಸ್ಥಾನ ಕೊಟ್ಟು ಬದಿಯಲ್ಲಿ ಕೂರಿಸಿದರು. ಇದು ಆಟಕ್ಕೆ ಮುಳುವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಮಲ್ಲಮ್ಮ ಅವರು ಉತ್ತರ ನೀಡಿದ್ದಾರೆ. ಅವರು ಈ ಆರೋಪವನ್ನು ಅಲ್ಲಗಳೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More