ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಉದ್ಯೋಗ ಕಳೆದುಕೊಂಡ ನಂತರ ನೊಯ್ಡಾದ ಯುವಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸಾಯುವ ನಿರ್ಧಾರ ಮಾಡಿದ 12ನೇ ಮಹಡಿಯ ಬಾಲ್ಕನಿಯಲ್ಲಿ ನೇತಾಡುತ್ತಿದ್ದ ಆತನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಪಾರ್ಟ್ಮೆಂಟ್ನ ನಿವಾಸಿಗಳು ಆತನಿಗೆ ಹಾರಬೇಡ ಎಂದು ಕಿರುಚುತ್ತಾ, ಗೋಗರೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ನೋಯ್ಡಾ: ಉದ್ಯೋಗ ಕಳೆದುಕೊಂಡ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದ ಯುವಕ ನೋಯ್ಡಾದಲ್ಲಿ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಅಪಾರ್ಟ್ಮೆಂಟ್ನ ನಿವಾಸಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos