[lazy-load-videos-and-sticky-control id=”QCgoQf6Yqg8″]
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ಪತ್ರೆಗಳ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಸ್ಟರ್ ಪ್ಲಾನ್ ಮಾಡಿದ್ದು, ನಾಳೆಯಿಂದ ಗುಣಲಕ್ಷಣವಿಲ್ಲದ ಕೊರೊನಾ ಪೀಡಿತ ಸೋಂಕಿತರನ್ನು ಬೆಂಗಳೂರಿನ ಮಾದಾವರ ಬಳಿ ಇರುವ BIEC ಯಲ್ಲಿ ನಿರ್ಮಾಣವಾಗಿರುವ ಕೊವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡಲು ಸಿಎಂ ಅಧಿಕೃತ ಸೂಚನೆ ಹೊರಡಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬಿಬಿಎಂಪಿ ದಕ್ಷಿಣ ವಲಯದ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗಳ ಮೇಲಿರುವ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ನಾನ್ ಕೊವಿಡ್ ರೋಗಿಗಳಿಗೆ ಆಸ್ಪತ್ರೆಗಳ ಬೆಡ್ ಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಇದರಿಂದಾಗಿ ನಾನ್ ಕೊವಿಡ್ ರೋಗಿಗಳಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವಂತೆ ಮಾಡುವುದು ಸಿಎಂ ಉದ್ದೇಶವಾಗಿದೆ.