ಹಿರಿಯ ನಾಯಕರಿಗೆ ಅಸಮಾಧಾನವಿಲ್ಲ, ಎಲ್ಲರನ್ನೂ ಭೇಟಿಯಾಗಿ ಆಶೀರ್ವಾದ ಪಡೆಯುವೆ: ಬಿವೈ ವಿಜಯೇಂದ್ರ, ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ

Updated on: Nov 14, 2023 | 12:15 PM

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತಾಡುವ ಪ್ರಯ್ನತ್ನ ಮಾಡಿದ್ದು ಅವರು ಬ್ಯೂಸಿಯಾಗಿದ್ದ ಕಾರಣ ಸ್ವಲ್ಪ ಸಮಯದ ಬಳಿಕ ಅವರೇ ವಾಪಸ್ಸು ಕರೆಮಾಡಲಿದ್ದಾರೆ ಎಂದರು. ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ದೆಹಲಿಯಿಂದ ಯಾರು ಬರಲಿದ್ದಾರೆ ಅನೋದನ್ನು ನಡ್ಡಾ ಜೀ ಅವರಿಂದ ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು:  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪಕ್ಷದ ಹಿರಿಯ ನಾಯಕರಲ್ಲಿ (senior leaders) ಯಾರಿಗೂ ತನ್ನ ವಿಷಯದಲ್ಲಿ ಅಸಮಾಧಾನವಿಲ್ಲ, ಎಲ್ಲರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವುದಾಗಿ ಹೇಳಿದರು. ಶುಕ್ರವಾರದಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ (BJP legislature party meet) ನಡೆಸುವುದು ನಿಗದಿಯಾಗಿದೆ ಎಂದು ಹೇಳಿದ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತಾಡುವ ಪ್ರಯ್ನತ್ನ ಮಾಡಿದ್ದು ಅವರು ಬ್ಯೂಸಿಯಾಗಿದ್ದ ಕಾರಣ ಸ್ವಲ್ಪ ಸಮಯದ ಬಳಿಕ ಅವರೇ ವಾಪಸ್ಸು ಕರೆಮಾಡಲಿದ್ದಾರೆ ಎಂದರು. ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ದೆಹಲಿಯಿಂದ ಯಾರು ಬರಲಿದ್ದಾರೆ ಅನೋದನ್ನು ನಡ್ಡಾ ಜೀ ಅವರಿಂದ ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More