ಬೆಂಗಳೂರಲ್ಲಿ ಪುನಃ ಮಳೆ, ಹಲವೆಡೆ ಟ್ರಾಫಿಕ್ ಜಾಮ್, ಸಾಮಾನ್ಯ ಜನಜೀವನ ಅಸ್ತವ್ಯಸ್ತ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದೆ. ಹಾಗೆ ನೋಡಿದರೆ ಅಕ್ಟೋಬರ್ 14ರಂದು ಮಳೆಯಾಗುವುದು ನಿಂತು ಹೋಗಲಿದೆ ಎನ್ನಲಾಗಿತ್ತು, ಆದರೆ ಇಂದು ಮತ್ತೇ ಅದು ಸುರಿಯಲಾರಂಭಿಸಿದೆ, ಯಾವಾಗ ನಿಲ್ಲುತ್ತದೆಯೋ?
ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಒಂದೇಸಮ ಮಳೆ ಸುರಿಯಲಾರಂಭಿಸಿದ ಕಾರಣ ಸಾಮಾನ್ಯ ಜನಜೀವನ ಅಸ್ಯವ್ಯಸ್ತಗೊಂಡಿದೆ. ಬೆಂಗಳೂರಿನ ಪ್ರಮುಖ ಜಂಕ್ಷನ್ಗಳಲ್ಲೊಂದಾದ ಮೇಖ್ರಿ ಸರ್ಕಲ್ ದೃಶ್ಯವನ್ನು ಇಲ್ಲಿ ನೋಡಬಹುದು. ಇದೊಂದೇ ಅಂತಲ್ಲ, ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇವತ್ತಿನ ಸಾಮಾನ್ಯ ದೃಶ್ಯವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳು, ಮತ್ತು ಕಚೇರಿಗಳಿಗೆ ಕೆಲಸಕ್ಕೆ ಹೋಗುವವರು ತಮ್ಮ ಸ್ಥಳಗಳನ್ನು ಮುಟ್ಟಲು ಸಾಕಷ್ಟು ಕಷ್ಟಪಡಬೇಕಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆಯೇ ಭಾರಿ ಮಳೆ