Massive rains in Hubballi: ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಜೋರು ಮಳೆ, ಹರಿಯುವ ನದಿಗಳಂತಾದ ರಸ್ತೆಗಳು

ಅರುಣ್​ ಕುಮಾರ್​ ಬೆಳ್ಳಿ

Updated on: May 09, 2023 | 7:03 PM

ನಾಳೆಯೂ ಹೀಗೆ ಮಳೆ ಸುರಿದರೆ ಮತದಾನದ ಪ್ರಮಾಣ ಬಹಳಷ್ಟು ಕಡಿಮೆಯಾಗಬಹುದು.

ಹುಬ್ಬಳ್ಳಿ: ಫಾರ್ ಎ ಚೇಂಜ್ ಇದು ಬೆಂಗಳೂರಲ್ಲ, ಹುಬ್ಬಳ್ಳಿ!  ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲದೆ, ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿಯ ದಾಜಿಬಾನ್ ಪೇಟೆಯ (Dajiban Pet) ರಸ್ತೆಗಳು ಹರಿಯವ ನದಿಗಳಂತೆ ಗೋಚರವಾದವು. ಅಂಗಡಿ-ಮುಂಗಟ್ಟುಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನಗಳು (two wheelers) ಹರಿಯುತ್ತಿದ್ದ ಮಳೆನೀರಲ್ಲಿ ಕೊಚ್ಚಿ ಹೋಗದ ಹಾಗೆ ಹಗ್ಗ ಕಟ್ಟಿದ್ದರು. ಹುಬ್ಬಳ್ಳಿಗೆ ಸಂತೆ ಮಾಡಲು ಬೇರೆ ಊರುಗಳಿಂದ ಬಂದಿದ್ದ ಜನ ಇದ್ದಕ್ಕಿದ್ದಂತೆ ಸುರಿದ ಮಳೆಯಿಂದ ಕಂಗಾಲಾಗಿ ಹೋದರು. ನಾಳೆಯೂ ಹೀಗೆ ಮಳೆ ಸುರಿದರೆ ಮತದಾನದ (voting) ಪ್ರಮಾಣ ಬಹಳಷ್ಟು ಕಡಿಮೆಯಾಗಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.