ಸುಹಾಸ್ ಶೆಟ್ಟಿಯ ಹತ್ಯೆ ಮತ್ತು ನಿನ್ನೆಯ ಬಂದ್​ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಮಂಗಳೂರು

ಅರುಣ್​ ಕುಮಾರ್​ ಬೆಳ್ಳಿ

Updated on: May 03, 2025 | 11:17 AM

ಮಂಗಳೂರಲ್ಲಿ ಜನರ ಮತ್ತು ವಾಹನಗಳ ಓಡಾಟ ನೋಡಿ ಎಲ್ಲ ಮಾಮೂಲಿನಂತಿದೆ ಅನಿಸೋದು ನಿಜವಾದರೂ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೂದಿ ಮುಚ್ಚಿದ ಕೆಂಡದಂಥ ಸ್ಥಿತಿ ಇದೆ. ಮೇ 1 ರಂದು ಹಂತಕರಿಗೆ ಬಲಿಯಾದ ಸುಹಾಸ ಶೆಟ್ಟಿಯ ಅಂತಿಮ ಸಂಸ್ಕಾರ ನಿನ್ನೆ ನೆರವೇರಿತು. ಜಿಲ್ಲಾಡಳಿತ ಮೇ 6 ರವರೆಗೆ ಸೆಕ್ಷನ್ 144ಜಾರಿಯಲ್ಲಿಟ್ಟಿದೆ, ಜನ ಗುಂಪುಗಳನ್ನು ಕಟ್ಟಿಕೊಂಡು ಓಡಾಡುವಂತಿಲ್ಲ.

ಮಂಗಳೂರು, ಮೇ 3: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishat) ಮತ್ತು ಬಜರಂಗ ದಳ ಸಂಘಟನೆಗಳು ನಿನ್ನೆ ಮಂಗಳೂರು ಬಂದ್ ಗೆ ಕರೆ ನೀಡಿದ್ದವು, ನಗರ ಅಕ್ಷರಶಃ ಸ್ತಬ್ಧವಾಗಿತ್ತು. ಇವತ್ತು ಬಂದರು ನಗರದಲ್ಲಿ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ನಮ್ಮ ಮಂಗಳೂರು ವರದಿಗಾರ ಹೇಳುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್​ಗಳದ್ದೇ ಹೆಚ್ಚು ಕಾರುಬಾರು. ಖಾಸಗಿ ಸೇರಿದಂತೆ ಸರ್ಕಾರೀ ಬಸ್ ಗಳ ಸೇವೆ ಅರಂಭವಾಗಿದೆ ಮತ್ತು ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿದ್ದು ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.

ಇದನ್ನೂ ಓದಿ:  ಸುಹಾಸ್​ಗೆ ನಿನ್ನೆ ಊರಿಗೆ ಬಾ ಅಂತ ಹೇಳಿದ್ದೆ, ಅದರೆ ಬರಲಿಲ್ಲ, ಕೊಲೆ ಸುದ್ದಿ ಬಂತು: ಮೋಹನ್ ಶೆಟ್ಟಿ, ಸುಹಾಸ್ ತಂದೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 03, 2025 10:40 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.