AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದಲ್ಲಿ ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರ್‌ನಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಉತ್ತರ ಕರ್ನಾಟಕದಲ್ಲಿ ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರ್‌ನಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಭೀಮೇಶ್​​ ಪೂಜಾರ್
| Edited By: |

Updated on: Oct 24, 2026 | 9:23 PM

Share

ಉತ್ತರ ಕರ್ನಾಟಕದ ರಾಯಚೂರು ಮತ್ತು ಕಲಬುರಗಿಯಲ್ಲಿ ತೀವ್ರ ಜಲಸಂಕಷ್ಟ ಎದುರಾಗಿದೆ. ಕುಡಿಯುವ ನೀರಿಗಾಗಿ ಜನ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಕಲ್ಬುರ್ಗಿಯಲ್ಲಿ ಪ್ರತಿಭಟನೆ ನಡೆದಿರುವಾಗ, ಬೀದರ್‌ನಲ್ಲಿ ಸಿದ್ದು ಕೋಳಾರ್ ಸ್ವಂತ ಖರ್ಚಿನಲ್ಲಿ ವನ್ಯಜೀವಿಗಳ ದಾಹ ತಣಿಸುತ್ತಿದ್ದಾರೆ. ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಆತಂಕವಿದೆ.

ರಾಯಚೂರು, ಅಕ್ಟೋಬರ್ 24: ಉತ್ತರ ಕರ್ನಾಟಕವು ತೀವ್ರ ಬರಗಾಲದಿಂದ ತತ್ತರಿಸಿದ್ದು, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಭವಣೆ ಹೆಚ್ಚಾಗಿದೆ. ಜನ ಖಾಸಗಿ ಟ್ಯಾಂಕರ್‌ಗಳ ಮೂಲಕ ಸಾವಿರಾರು ರೂಪಾಯಿ ನೀಡಿ ನೀರು ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಬೋರ್‌ವೆಲ್‌ಗಳು ಬತ್ತಿಹೋಗಿದ್ದು, ಹಲವು ಪ್ರದೇಶಗಳಲ್ಲಿ ನೀರಿಗಾಗಿ ಜನರು ಹಾಹಾಕಾರ ನಡೆಸುತ್ತಿದ್ದಾರೆ. ರಾಯಚೂರು ನಗರದ ಕೆಲವು ಪ್ರದೇಶಗಳಲ್ಲಿ ನೀರಿಲ್ಲದೆ ಪರದಾಡುತ್ತಿರುವ ಜನರು, ಮೂಲಸೌಕರ್ಯಗಳ ಕೊರತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ವರದಿಯ ಬಳಿಕ ರಾಯಚೂರು ಪಾಲಿಕೆ ಎಚ್ಚೆತ್ತುಕೊಂಡು, ನೀರಿನ ಸಮಸ್ಯೆ ಪರಿಹರಿಸಲು ಸಹಾಯವಾಣಿ ಆರಂಭಿಸಿದೆ. ಮಾರ್ಚ್‌ನಿಂದಲೇ ಆರು ಟ್ಯಾಂಕರ್‌ಗಳನ್ನು ಖರೀದಿಸಿ, ತುರ್ತು ನೀರು ಪೂರೈಕೆಗೆ ಕ್ರಮ ಕೈಗೊಂಡಿದೆ.

ಮತ್ತೊಂದೆಡೆ, ಕಲಬುರಗಿಯ ರೇವಣಸಿದ್ದೇಶ್ವರ ಕಾಲೋನಿ ನಿವಾಸಿಗಳು ನೀರಿನ ಕೊರತೆಯನ್ನು ವಿರೋಧಿಸಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಶಾಸಕರು ಮತ್ತು ಕಾರ್ಪೊರೇಟರ್‌ಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರಷ್ಟೇ ಅಲ್ಲದೆ, ಮೂಕ ಜೀವಿಗಳೂ ನೀರಿನ ಕೊರತೆಯಿಂದ ತೀವ್ರವಾಗಿ ಬಳಲುತ್ತಿವೆ. ಬೀದರ್‌ನ ಕಪಲಾಪುರ ಗ್ರಾಮದ ಸಿದ್ದು ಕೋಳಾರ್ ಎಂಬುವರು ಆಧುನಿಕ ಭಗೀರಥನಾಗಿ ವನ್ಯಜೀವಿಗಳ ದಾಹ ತಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನೀರಿನ ಮೂಲಗಳಿಲ್ಲದೆ ಪ್ರಾಣಿಗಳು ಪರಿತಪಿಸುತ್ತಿರುವುದನ್ನು ಗಮನಿಸಿದ ಸಿದ್ದು, ತಮ್ಮ ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ನೀರು ತಂದು ಅರಣ್ಯದಲ್ಲಿ ಹೊಂಡಗಳನ್ನು ಮಾಡಿ ತುಂಬಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More