‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ’: ಬಾಲಚಂದ್ರ ಜಾರಕಿಹೊಳಿ‌

Edited By:

Updated on: Nov 25, 2026 | 11:21 AM

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಇವತ್ತಲ್ಲ ನಾಳೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದ್ದು, ಅದಕ್ಕೆ ತಮ್ಮ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಉಮೇಶ್ ಕತ್ತಿ ಪ್ರಸ್ತಾಪದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಬೆಳಗಾವಿ, ನವೆಂಬರ್​​ 25: ಡಿಸೆಂಬರ್​​ 2ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಇದಕ್ಕೂ ಮುನ್ನವೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ ಎಂದು ಬಾಲಚಂದ್ರ ಜಾರಕಿಹೊಳಿ‌ ಅಭಿಪ್ರಾಯಪಟ್ಟಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿರೀಕ್ಷೆಯಷ್ಟು ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಉಮೇಶ್ ಕತ್ತಿ ಪ್ರಸ್ತಾಪಿಸಿದ್ದರು. ಪ್ರತ್ಯೇಕ ರಾಜ್ಯ ಆದ್ರೆ ಬೆಳಗಾವಿ ರಾಜಧಾನಿ ಆಗುತ್ತೆ. ಆಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ ಅಂತಾ ಹೇಳುತ್ತಿದ್ದರು. ಉತ್ತರ ಕರ್ನಾಟಕ ಇವತ್ತಲ್ಲ ನಾಳೆ ಪ್ರತ್ಯೇಕ ರಾಜ್ಯ ಆಗುತ್ತದೆ. ಐದು ವರ್ಷ ಇಲ್ಲವೇ 10 ವರ್ಷ ಬಿಟ್ಟು ಪ್ರತ್ಯೇಕ ರಾಜ್ಯ ಆಗುತ್ತೆ. ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More