ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ: ಸಿಎಂ ಘೋಷಣೆ

Edited By:

Updated on: Oct 25, 2026 | 10:35 PM

ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್​ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದರು. ಕಿತ್ತೂರು ಕೋಟೆ ಮರುಸೃಷ್ಟಿಗೆ 40 ಕೋಟಿ ರೂ. ಹಾಗೂ ವೃಷಭೇಂದ್ರ ಏತ ನೀರಾವರಿಗೆ 500 ಕೋಟಿ ರೂ. ಮೀಸಲಿಡುವುದಾಗಿ ಸಿಎಂ ಘೋಷಿಸಿದರು.

ಬೆಳಗಾವಿ, ಅಕ್ಟೋಬರ್​​ 25: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ‘ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ಇನ್ನು ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ’ಯನ್ನಾಗಿ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ‘ಕಿತ್ತೂರು ರಾಣಿ ಚನ್ನಮ್ಮನ ಕೋಟೆ ಮರುಸೃಷ್ಟಿಗೆ ಶಾಸಕರಿಂದ ಬೇಡಿಕೆ ಇಡಲಾಗಿದೆ. ಮುಂದಿನ ಬಜೆಟ್​ನಲ್ಲಿ ಕಿತ್ತೂರು ಕೋಟೆ ಮರುಸೃಷ್ಟಿಗೆ 40 ಕೋಟಿ ರೂ ಸೇರಿಸುವಂತೆ ಈಗಲೇ ಆದೇಶ ಮಾಡುತ್ತೇನೆ. ಈ ಭಾಗದ ವೃಷಭೇಂದ್ರ ಏತನೀರಾವರಿಗೆ 500 ಕೋಟಿ ರೂ. ಮೀಸಲಿಡುತ್ತೇನೆ. ಇತಿಹಾಸ ಉಳಿಸಬೇಕು ಅಂದರೆ ಇಂತಹ ಕಾರ್ಯಕ್ರಮ ರೂಪಿಸಬೇಕು’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More