Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, 23 ಮಂದಿಗೆ ಗಾಯ

Updated on: Dec 09, 2025 | 8:51 AM

ಉತ್ತರ ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ನೆಲಸಮಗೊಂಡಿವೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ರಾತ್ರಿ 11.15 ಕ್ಕೆ ಭೂಕಂಪ ಸಂಭವಿಸಿದೆ. ಹಲವು ವಿಡಿಯೋಗಳು ವೈರಲ್ ಆಗಿವೆ.ಹಚಿನೋಹೆಯ ಹೋಟೆಲ್‌ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 70 ಸೆಂ.ಮೀ.ವರೆಗಿನ ಸುನಾಮಿ ಅಲೆಗಳು ಎದ್ದಿವೆ.ಮುನ್ನೆಚ್ಚರಿಕೆಯಾಗಿ ದುರ್ಬಲ ಪ್ರದೇಶಗಳಲ್ಲಿರುವ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಜಪಾನ್, ಡಿಸೆಂಬರ್ 09: ಉತ್ತರ ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ನೆಲಸಮಗೊಂಡಿವೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ರಾತ್ರಿ 11.15 ಕ್ಕೆ ಭೂಕಂಪ ಸಂಭವಿಸಿದೆ. ಹಲವು ವಿಡಿಯೋಗಳು ವೈರಲ್ ಆಗಿವೆ.ಹಚಿನೋಹೆಯ ಹೋಟೆಲ್‌ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 70 ಸೆಂ.ಮೀ.ವರೆಗಿನ ಸುನಾಮಿ ಅಲೆಗಳು ಎದ್ದಿವೆ.ಮುನ್ನೆಚ್ಚರಿಕೆಯಾಗಿ ದುರ್ಬಲ ಪ್ರದೇಶಗಳಲ್ಲಿರುವ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More