Karnataka Assembly polls; ಕಾಂಗ್ರೆಸ್ ಗೆಲ್ಲೋದು 141 ಸ್ಥಾನ, ಮುಖ್ಯಮಂತ್ರಿಯ ಘೋಷಣೆ ಮೇ 15ರಂದು ಖರ್ಗೆ ಮಾಡಲಿದ್ದಾರೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 08, 2023 | 1:10 PM

ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ 5 ಪ್ರಮುಖ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವ ಆದೇಶ ಹೊರಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್ ಮೇ 13 ರಂದು ಫಲಿತಾಂಶ (result) ಪ್ರಕಟವಾಗುತ್ತದೆ. ಮೇ 15ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆ ನಡೆಯುತ್ತದೆ ಮತ್ತು ಚುನಾವಣಾ ಪ್ರಚಾರದಲ್ಲಿ ನೀಡಿದ 5 ಪ್ರಮುಖ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ಸಂಪುಟ ಸಭೆ ಯಾರ ನೇತೃತ್ವದಲ್ಲಿ ನಡೆಯಲಿದೆ ಅಂತ ಪತ್ರಕರ್ತರೊಬ್ಬರು ಕೇಳಿದ ಟ್ರಿಕ್ಕಿ ಪ್ರಶ್ನೆಗೆ ಶಿವಕುಮಾರ್ ಅದರ ಬಗ್ಗೆ ಮೇ 15 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಘೋಷಣೆ ಮಾಡಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.