‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು

Updated on: May 05, 2026 | 8:58 PM

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್​ಐಆರ್ ಆಗಿದೆ. ಅವನ ಎಫ್​ಐಆರ್​ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ ಹೂಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇಲ್ಲಿ ಕೇವಲ ರಾಜ್​ಕುಮಾರ್ ಅಭಿಮಾನಿಗಳ ಸಂಘ ಮಾತ್ರ ಸೇರಿಲ್ಲ. ರಕ್ಷಣಾ ವೇದಿಕೆ, ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಇಲ್ಲಿಗೆ ಬಂದು ನನಗೆ ಬೆಂಬಲ ನೀಡಿದ್ದಾರೆ. ರಾಜ್​ಕುಮಾರ್ ವಿಚಾರದಲ್ಲಿ ಈವರೆಗೂ ಯಾರೂ ಸೊಲ್ಲು ಎತ್ತಿರಲಿಲ್ಲ. ಆದರೆ ನಿರುದ್ಯೋಗಿ ಚೇತನ್ ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ’ ಎಂದು ಸಾರಾ ಗೋವಿಂದು (Sa Ra Govindu) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More