‘ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು’; ಯೂಟ್ಯೂಬರ್ ಧ್ರುವ್ ರಾಠೀ ಗಂಭೀರ ಆರೋಪ

Updated on: Oct 11, 2026 | 8:07 PM

ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆದಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠೀ ಅವರನ್ನು ನಿನ್ನೆ ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಆದರೆ, ಇದಾದ ಬಳಿಕ ಪ್ರತಿಕ್ರಿಯೆ ನೀಡಿರುವ ಧ್ರುವ್ ರಾಠೀ, 'ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಬಂಧಿಸಿಯೂ ಇರಲಿಲ್ಲ. ನನ್ನನ್ನು ಕಿಡ್ನಾಪ್ ಮಾಡಲಾಗಿತ್ತು' ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯ ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ, ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ರಾಠೀ ಅವರ ಮನೆಯಿಂದಲೇ ಅವರನ್ನು ವಶಕ್ಕೆ ಪಡೆದಿದ್ದರು.

ನವದೆಹಲಿ, ಅಕ್ಟೋಬರ್ 11: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಶನಿವಾರ ಕರೆ ನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆದಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠೀ ಅವರನ್ನು ನಿನ್ನೆ ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಆದರೆ, ಇದಾದ ಬಳಿಕ ಪ್ರತಿಕ್ರಿಯೆ ನೀಡಿರುವ ಧ್ರುವ್ ರಾಠೀ, ‘ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಬಂಧಿಸಿಯೂ ಇರಲಿಲ್ಲ. ನನ್ನನ್ನು ಕಿಡ್ನಾಪ್ ಮಾಡಲಾಗಿತ್ತು’ ಎಂದು ಹೇಳಿದ್ದಾರೆ.

ಮತದಾರರ ಪಟ್ಟಿಯ ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ, ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ರಾಠೀ ಅವರ ಮನೆಯಿಂದಲೇ ಅವರನ್ನು ವಶಕ್ಕೆ ಪಡೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 11, 2026 03:53 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More