ಬಿಜೆಪಿಯ ಒಬ್ಬೇಒಬ್ಬ ಕಾರ್ಯಕರ್ತ ಕಾಂಗ್ರೆಸ್ ಸೇರಲ್ಲ, ಸಿದ್ದರಾಮಯ್ಯ ಬರೀ ಬೊಗಳೆ ಬಿಡುತ್ತಾರೆ: ಮುನಿರತ್ನ ನಾಯ್ಡು, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Feb 20, 2023 | 2:58 PM

ಸಿದ್ದರಾಮಯ್ಯ ಅಧಿಕಾರದ್ಲಲಿದ್ದಾಗಲೇ 80 ಸೀಟು ಗೆಲ್ಲಲಾಗಲಿಲ್ಲ, ಈಗ ಅದ್ಹೇಗೆ 130 ಕ್ಕಿಂತ ಸೀಟು ಹೆಚ್ಚು ಗೆಲ್ಲುತ್ತಾರೆ? ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಮುನಿರತ್ನ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಸಚಿವ ಮುನಿರತ್ನ ನಾಯ್ಡು (Munirathna Naidu) ತಾನು ಕಾಂಗ್ರೆಸ್ ಪಕ್ಷಕ್ಕೆ (Congress Party) ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿದು ಎಂದು ಹೇಳಿದರು. ಸಿದ್ದರಾಮಯ್ಯ (Siddaramaiah) ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತ್ಯಜಿಸಿ ಬಂದ ನಾಯಕರ ಮನೆಗಳಿಗೆ ಎಡತಾಕಿ ಕಾಂಗ್ರೆಸ್ ಗೆ ಬನ್ನಿ ಅಂತ ದುಂಬಾಲು ಬಿದ್ದಿದ್ದಾರೆ ಎಂದು ಮುನಿರತ್ನ ಹೇಳಿದರು. ಬಿಜೆಪಿಯ ಒಬ್ಬ ಚಿಕ್ಕ ಕಾರ್ಯಕರ್ತ ಕೂಡ ಕಾಂಗ್ರೆಸ್ ಸೇರುವುದಿಲ್ಲ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಅಧಿಕಾರದ್ಲಲಿದ್ದಾಗಲೇ 80 ಸೀಟು ಗೆಲ್ಲಲಾಗಲಿಲ್ಲ, ಈಗ ಅದ್ಹೇಗೆ 130 ಕ್ಕಿಂತ ಸೀಟು ಹೆಚ್ಚು ಗೆಲ್ಲುತ್ತಾರೆ? ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಮುನಿರತ್ನ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.