ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವೆ: ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವೆ: ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 05, 2024 | 6:02 PM

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕಿದೆ, ಭಾರತದ ವಿಶ್ವದ 3 ನೇ ಅತಿದೊಡ್ಡ ಎಕಾನಮಿಯಾಗುವುದನ್ನು ನೋಡಬೇಕಿದೆ ಮತ್ತು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕಿದೆ ಎಂದು ಯತ್ನಾಳ್ ಹೇಳಿದರು.

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ (Lok Sabha polls) ಕೊಪ್ಪಳ, ಬೆಳಗಾವಿ ಅಥವಾ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ತನ್ನ ಮೇಲೆ ಆಗ್ರಹವಿದ್ದರೂ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಆದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಪರವಾಗಿ ಪ್ರಚಾರ ಮಾಡುವುದಾಗಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದರು. ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಯತ್ನಾಳ್ 28 ಕ್ಷೇತ್ರಗಳಲ್ಲಿ ಪಕ್ಷದ ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಪ್ರಚಾರ ಮಾಡೋದಾಗಿ ಹೇಳಿದರು. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ, ನರೇಂದ್ರ ಮೋದಿಯವರು (PM Narendra Modi) ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕಿದೆ, ಭಾರತದ ವಿಶ್ವದ 3 ನೇ ಅತಿದೊಡ್ಡ ಎಕಾನಮಿಯಾಗುವುದನ್ನು ನೋಡಬೇಕಿದೆ ಮತ್ತು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕಿದೆ ಎಂದು ಯತ್ನಾಳ್ ಹೇಳಿದರು. ಭಿನ್ನಾಭಿಪ್ರಾಯಗಳು ಎಲ್ಲ ಪಕ್ಷಗಳಲ್ಲಿ ಇರುತ್ತವೆ, ಅದರೆ ಇದು ದೇಶದ ಚುನಾವಣೆಯಾಗಿರುವುದರಿಂದ ಮತ್ತು ಮೋದಿಯವರು ಪ್ರಧಾಮಂತ್ರಿಯಾಗುವುದು ಮುಖ್ಯವಾಗಿರುವುದರಿಂದ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ ಎಂದು ವಿಜಯಪುರ ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪೂಜ್ಯ ತಂದೆ, ಅವರ ಮಗ ವಿಫಲ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ ಯಾರ ಬಗ್ಗೆ ನೋಡಿ