AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ

Ganapathi Sharma
|

Updated on: Jan 22, 2026 | 8:11 AM

Share

ಕರ್ನಾಟಕದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದ ಇತರ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿಯೂ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಭಾಷಣ ವಿಚಾರವಾಗಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಥಾವರ್‌ಚಂದ್ ಗೆಹ್ಲೋಟ್, ಆರ್.ಎನ್. ರವಿ, ಪಿಣರಾಯಿ ವಿಜಯನ್ ಅವರ ಆರೋಪ-ಪ್ರತ್ಯಾರೋಪಗಳು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿವೆ. ಸಂವಿಧಾನದ 176ನೇ ವಿಧಿಯ ಪ್ರಕಾರ, ರಾಜ್ಯಪಾಲರು ಸರ್ಕಾರ ನೀಡಿದ ಭಾಷಣವನ್ನು ಓದಬೇಕು.

ಬೆಂಗಳೂರು, ಜನವರಿ 21: ಕರ್ನಾಟಕ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಅಂಶಗಳನ್ನು ಓದಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ದಕ್ಷಿಣ ಭಾರತದಲ್ಲಿ ತೀವ್ರಗೊಂಡಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡುಳಲ್ಲಿಯೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ, ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ.

ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಭಾಷಣ ಮಾಡದೆ ಸದನದಿಂದ ಹೊರ ನಡೆದಿದ್ದರು. ಭಾಷಣದಲ್ಲಿ ಆಧಾರರಹಿತ ಹೇಳಿಕೆಗಳಿವೆ ಎಂದು ಕೂಡ ಆರೋಪಿಸಿದ್ದರು. ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಭಾಷಣದ ಕೆಲವು ಅಂಶಗಳನ್ನು ಕೈಬಿಟ್ಟು ಓದಿದ್ದಾರೆ ಎಂದು ದೂರಿದ್ದರು. ಸಂವಿಧಾನದ 176ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಸರ್ಕಾರ ನೀಡಿದ ಭಾಷಣವನ್ನು ಓದಬೇಕು ಎಂದು ಸ್ಪಷ್ಟಪಡಿಸಲಾಗಿದೆ. 1966ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಇದೇ ರೀತಿಯ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರಾಕರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು ಎಂಬುದು ಗಮನಾರ್ಹ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ