ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್: ಸಚಿವ ಯು.ಟಿ. ಖಾದರ್ ಸ್ಪಷ್ಟನೆ

Edited By:

Updated on: Aug 24, 2026 | 12:32 PM

ಕೃತಕ ಪನ್ನೀರ್ ನಿಷೇಧ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್, ಕೃತಕ ಪನ್ನೀರ್ ಮಾತ್ರವಲ್ಲ, ಎಲ್ಲಾ ನಕಲಿ ಉತ್ಪನ್ನಗಳನ್ನೂ ಬ್ಯಾನ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವರ್ಷದ ನಿಷೇಧ ಅವಧಿಯು ಆಯುಕ್ತರ ಅಧಿಕಾರಕ್ಕೆ ಸೀಮಿತವಾಗಿದ್ದು, ಶಾಶ್ವತ ನಿಯಮಗಳಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು. ಹಣ್ಣುಗಳಲ್ಲಿ ರಾಸಾಯನಿಕಗಳ ಬಳಕೆ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು, ಆಗಸ್ಟ್​​ 24: ಕರ್ನಾಟಕದಲ್ಲಿ ಕೃತಕ ಪನ್ನೀರ್ ನಿಷೇಧದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕೃತಕ ಪನ್ನೀರ್ ಮಾತ್ರವಲ್ಲದೆ, ಎಲ್ಲಾ ರೀತಿಯ ಕೃತಕ ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕೃತಕ ಪನ್ನೀರ್ ಅನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವ ಬಗ್ಗೆ ಪ್ರಶ್ನಿಸಿದಾಗ, ಆಯುಕ್ತರಿಗೆ ಒಂದು ವರ್ಷದವರೆಗೆ ಮಾತ್ರ ನಿಷೇಧಿಸುವ ಅಧಿಕಾರವಿದೆ ಎಂದು ಸಚಿವರು ವಿವರಿಸಿದರು. ಶಾಶ್ವತ ನಿಯಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಪ್ರತಿ ವರ್ಷವೂ ಈ ಕುರಿತು ಆದೇಶಗಳನ್ನು ಹೊರಡಿಸುವ ಬದಲು, ಬಲವಾದ ಮತ್ತು ಶಾಶ್ವತ ನಿಯಮಗಳು ಬೇಕು ಎಂದು ಅವರು ಪ್ರತಿಪಾದಿಸಿದರು. ಹಣ್ಣುಗಳಿಗೆ ರಾಸಾಯನಿಕಗಳ ಬಳಕೆ ಬಗ್ಗೆಯೂ ಸಚಿವರು ಕಳವಳ ವ್ಯಕ್ತಪಡಿಸಿದ್ದು, ಬಾಳೆಹಣ್ಣು, ಸಪೋಟ, ಮಾವಿನ ಹಣ್ಣು ಸೇರಿದಂತೆ ಹಲವು ಹಣ್ಣುಗಳನ್ನು ರಾಸಾಯನಿಕ ಬಳಸಿ ಮಾಗಿಸುತ್ತಿರುವುದನ್ನು ತಡೆಯಬೇಕಿದೆ ಎಂದವರು ಇದೇ ವೇಳೆ ತಿಳಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us