ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಬದಲಾಯ್ತು ಡಿಕೆಶಿ ಮಾತಿನ ವರಸೆ

Updated on: May 19, 2025 | 5:54 PM

ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀಯ ಹಣ ಬಾಕಿ ಉಳಿದುಕೊಂಡಿದೆ. ಇದರಿಂದ ರಾಜ್ಯ ಜನರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಗೃಹಲಕ್ಷ್ಮಿ ಹಣವನ್ನ (Gruhalakshmi Scheme Money) ಪ್ರತಿ ತಿಂಗಳು ಕೊಡುತ್ತೇವೆ ಅಂತ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಉಲ್ಟಾ ಹೊಡೆದಿದ್ದಾರೆ.

ವಿಜಯನಗರ, (ಮೇ 19): ಗೃಹಲಕ್ಷ್ಮಿ ಹಣವನ್ನ (Gruhalakshmi Scheme Money) ಪ್ರತಿ ತಿಂಗಳು ಕೊಡುತ್ತೇವೆ ಅಂತ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಉಲ್ಟಾ ಹೊಡೆದಿದ್ದಾರೆ. ವಿಜಯನಗರದಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ ಕುರಿತ ಸುದ್ದಿಗೋಷ್ಠಿಯಲ್ಲಿ ಗೃಹ ಲಕ್ಷ್ಮೀ ಹಣ ವಿಳಂಬದ ಬಗ್ಗೆ ಪತ್ರಕರ್ತರು ಹೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, . ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಎಂದು ಹೇಳಿದ್ದಾರೆ.