ಮಹಾಕುಂಭದ ಕಾಲ್ತುಳಿತ ದೊಡ್ಡ ಘಟನೆಯೇನಲ್ಲ; ಹೇಮಾ ಮಾಲಿನಿ ಸಮರ್ಥನೆ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿನ ಮಹಾಕುಂಭದ ಕಾಲ್ತುಳಿತದ ಘಟನೆಯನ್ನು 'ದೊಡ್ಡ ವಿಷಯವೇನಲ್ಲ' ಎಂದಿರುವ ಬಿಜೆಪಿ ಸಂಸದೆ ಹೇಮಾಮಾಲಿನಿ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಕೆಲವು ದಿನಗಳ ನಂತರ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಈ ಹೇಳಿಕೆ ನೀಡಿದ್ದಾರೆ.
ಪ್ರಯಾಗರಾಜ್: ಪ್ರಯಾಗರಾಜ್‌ನಲ್ಲಿ ಇತ್ತೀಚಿನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದಾರೆ. ಅಖಿಲೇಶ್ ಯಾದವ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಮಹಾಕುಂಭದ ಕಾಲ್ತುಳಿತದ ಪರಿಸ್ಥಿತಿಯನ್ನು ತಪ್ಪಾಗಿ ನಿರ್ವಹಿಸಿದೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಹೇಮಾಮಾಲಿನಿ ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಸಮರ್ಥಿಸಿಕೊಂಡಿದ್ದಾರೆ. ಈ ದುರದೃಷ್ಟಕರ ಘಟನೆಯ ಹೊರತಾಗಿಯೂ ಮಹಾಕುಂಭವನ್ನು ಉತ್ತಮವಾಗಿ ನಿರ್ವಹಿಸಲಾಗಿದೆ ಎಂದು ಹೇಳಿದ್ದಾರೆ. ಕಾಲ್ತುಳಿತದ ಸಂಗತಿ ದುರಾದೃಷ್ಟಕರವೇ ಆಗಿದ್ದರೂ ಅದೇನೂ ದೊಡ್ಡ ಸಂಗತಿಯಲ್ಲ ಎಂದು ಹೇಮಾಮಾಲಿನಿ ಸಮರ್ಥನೆ ಮಾಡಿಕೊಂಡಿದ್ದಾರೆ. ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದರು ಮತ್ತು 60ಕ್ಕಿಂತ ಹೆಚ್ಚು ಜನರು ಗಾಯಗೊಂಡಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ