ಡಾ ಸುಧಾಕರ್ ವರಿಷ್ಠರ ಬಳಿ ವಿಜಯೇಂದ್ರ ವಿರುದ್ಧ ದೂರು ಒಯ್ದಿದ್ದರೆ ತಪ್ಪೇನೂ ಇಲ್ಲ: ಪಿ ರಾಜೀವ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 29, 2025 | 7:55 PM

ಡಾ ಸುಧಾಕರ್ ವರಿಷ್ಠರಿಗೆ ದೂರು ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ, ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದಾದರೂ ನಿಯಮದ ಉಲ್ಲಂಘನೆಯಾದರೆ ದೂರು ಸಲ್ಲಿಸಲು ಅವಕಾಶವಿದೆ ಮತ್ತು ಅದಕ್ಕೆಂದೇ ಅಪೀಲ್ಸ್ ಅಥಾರಿಟಿಯೊಂದನ್ನು ರಚಿಸಲಾಗಿರುತ್ತದೆ, ಗಮನಿಸಬೇಕಾದ ಸಂಗತಿಯೆಂದರೆ, ಜಿಲ್ಲೆಯೊಂದರ ಅಧ್ಯಕ್ಷನ ಚುನಾವಣೆ ನಡೆಯುವಾಗ ಅಲ್ಲಿನ ಚುನಾವಣಾಧಿಕಾರಿ ಬೇರೆ ಜಿಲ್ಲೆಯವರಾಗಿರುತ್ತಾರೆ ಎಂದು ರಾಜೀವ್ ಹೇಳಿದರು.

ಬೆಂಗಳೂರು: ಸಂಸದ ಡಾ ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಪಿ ರಾಜೀವ್ ಅವರು, ಸಂಸದರ ಅರೋಪಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, ಅವರು ಮಾಡಿರುವ ಆರೋಪಗಳು ಚುನಾವಣೆ ಹಿನ್ನೆಲೆಯಲ್ಲಿ ಬಂದಿರುವುದರಿಂದ ಪಕ್ಷದ ರಾಜ್ಯ ಚುನಾವಣಾಧಿಕಾರಿಗಳು ಗಮನಿಸಿರುತ್ತಾರೆ ಮತ್ತು ಅವರ ಅಭಿಪ್ರಾಯವನ್ನೂ ಪಡೆದಿರುತ್ತಾರೆ, ಅಧಿಕೃತವಾದ ಮಾಹಿತಿ ಇನ್ನೂ ಕಾರ್ಯಾಲಯ ತಲುಪಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಜಯೇಂದ್ರರನ್ನು ಬದಲಾಯಿಸದಿದ್ದರೆ ಪಕ್ಷ ಅವನತಿ ತಲುಪೋದು ಗ್ಯಾರಂಟಿ: ಡಾ ಕೆ ಸುಧಾಕರ್, ಸಂಸದ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.