ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರಲ್ಲಿ ತಪ್ಪಿಲ್ಲ: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಡೋಲಾಯಮನ ಸ್ಥಿತಿಯಲ್ಲಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಅಂತರ್ಯುದ್ಧ ನಡೆಯುತ್ತಿದೆ, ಸಿದ್ದರಾಮಯ್ಯ ತಮ್ಮ ಬೆಂಬಲಿಗರ ಮೂಲಕ ಹೇಳಿಕೆಗಳನ್ನು ನೀಡಿಸಿದರೆ ಸಿಎಂ ಆಗಲು ತವಕಿಸುತ್ತಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರು ಹೇಳಿಸುತ್ತಾರೆ. ಇವರಿಬ್ಬರೂ ಬೇಡ ಅನ್ನುವ ಮೂರನೇಯವರು ತಮ್ಮದೇ ಆದ ಹೋರಾಟ ನಡೆಸಿದ್ದಾರೆ ಎಂದು ಶೆಟ್ಟರ್ ಹೇಳಿದರು.
ಹುಬ್ಬಳ್ಳಿ, ಮಾರ್ಚ್ 29: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಅದು ರಾಜಕಾರಣದ ಭಾಗ ಎಂದರು. ಹಿಂದೆ ತಾನು ರಾಜ್ಯ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ ಮಂತ್ರಿಯಾಗಿದ್ದಾಗ ದೆಹಲಿಯಲ್ಲಿ ಯುಪಿಎ ಸರ್ಕಾರದ ಮಂತ್ರಿಗಳನ್ನು ಮತ್ತು ಸಿಎಂ ಆಗಿದ್ದಾಗ ಆಗಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು ಭೇಟಿಯಾಗಿದ್ದುಂಟು ಎಂದು ಶೆಟ್ಟರ್ ಹೇಳಿದರು.
ಇದನ್ನೂ ಓದಿ: ಕುಮಾರಸ್ವಾಮಿಯವರನ್ನು 30 ವರ್ಷಗಳಿಂದ ಭೇಟಿಯಾಗುತ್ತಿದ್ದೇನೆ, ವಿಶೇಷವೇನೂ ಇಲ್ಲ: ಸತೀಶ್ ಜಾರಕಿಹೊಳಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos