ವಿಚಾರಣೆಗೆ ಇಂದು ಹಾಜರಾಗುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 30, 2022 | 10:42 AM

ಪ್ರಸ್ತುತ ಮುಜಾರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಅವರನ್ನು ಶನಿವಾರ ವಿಚಾರಣೆಗೆ ಹಾಜರಾಗುವಂತೆ ವಸತಿ ಇಲಾಖೆ ಕಾರ್ಯದರ್ಶಿ ಜೆ ರವಿಶಂಕರ್ ನೋಟಿಸ್ ನೀಡಿದ್ದಾರೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರಿಂದಲೇ ವಿವಾದಗಳು (controversy) ಸೃಷ್ಟಿಯಾಗುತ್ತವೆಯೋ ಅಥವಾ ವಿವಾದಗಳೇ ಅವರ ಬೆನ್ನಟ್ಟುತ್ತವೆಯೋ ಅಂತ ಗೊತ್ತಾಗುತ್ತಿಲ್ಲ ಮಾರಾಯ್ರೇ. ಪ್ರಸ್ತುತ ಮುಜಾರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಅವರನ್ನು ಶನಿವಾರ ವಿಚಾರಣೆಗೆ ಹಾಜರಾಗುವಂತೆ ವಸತಿ ಇಲಾಖೆ ಕಾರ್ಯದರ್ಶಿ ಜೆ ರವಿಶಂಕರ್ ನೋಟಿಸ್ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ವಿರುದ್ಧ ಕೇಳಿಬಂದಿದ್ದ ಅರೋಪಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಯಲಿದೆ.