15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ

Updated on: Mar 03, 2026 | 1:56 PM

ಬೆಂಗಳೂರಿನಲ್ಲಿ 15 ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದ ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬ ಕುಖ್ಯಾತ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.4 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಈತ ಮಾದಪ್ಪನ ಬೆಟ್ಟಕ್ಕೆ ದೇವರ ದರ್ಶನಕ್ಕೆ ಬಂದಿದ್ದಾಗ ಸೆರೆಯಾಗಿದ್ದಾನೆ.

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬಾತನೇ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 1.40 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಾಜ್ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ಮಾದಪ್ಪನ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ಹೋಗಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಒಟ್ಟಾರೆ 15 ಕಳ್ಳತನ ಪ್ರಕರಣಗಳಲ್ಲಿ ಈತ ಶಾಮೀಲಾಗಿದ್ದ ಎಂದು ತಿಳಿದುಬಂದಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More