ಸಂಪುಟ ಪುನಾರಚನೆ ಜತೆ ಇನ್ನಷ್ಟು ತಂತ್ರಗಾರಿಕೆ ಹೆಣೆದ ಡಿಕೆಶಿ: ಬೆಂಬಲಿಗರಿಗೆ ಮಹತ್ವದ ಸಂದೇಶ ರವಾನೆ
ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನಾರಚನೆಯಾಗುವುದು ಖಚಿತವಾಗಿದೆ. ಆದ್ರೆ, ಸಿಎಂ ಬದಲಾವಣೆ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಸಿಎಂ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಿರಂತರ ದೆಹಲಿ ಪ್ರವಾಸ ಕುತೂಹಲಕ್ಕೆ ಕಾರಣವಾಗಿದೆ. ಇಂದು (ಅಕ್ಟೋಬರ್ 27) ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಭೇಟಿಗೆ ರಾಹುಲ್ ಗಾಂಧಿ ಸಮಯ ಕೊಟ್ಟಿಲ್ಲ. ಹೀಗಾಗಿ ಡಿಕೆಶಿ ದಿಲ್ಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದ್ರೆ, ನವೆಂಬರ್ 11ರಂದು ಪ್ರತ್ಯೇಕ ಭೇಟಿಗೆ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು, (ಅಕ್ಟೋಬರ್ 27): ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನಾರಚನೆಯಾಗುವುದು ಖಚಿತವಾಗಿದೆ. ಆದ್ರೆ, ಸಿಎಂ ಬದಲಾವಣೆ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಸಿಎಂ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಿರಂತರ ದೆಹಲಿ ಪ್ರವಾಸ ಕುತೂಹಲಕ್ಕೆ ಕಾರಣವಾಗಿದೆ. ಇಂದು (ಅಕ್ಟೋಬರ್ 27) ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಭೇಟಿಗೆ ರಾಹುಲ್ ಗಾಂಧಿ ಸಮಯ ಕೊಟ್ಟಿಲ್ಲ. ಹೀಗಾಗಿ ಡಿಕೆಶಿ ದಿಲ್ಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದ್ರೆ, ನವೆಂಬರ್ 11ರಂದು ಪ್ರತ್ಯೇಕ ಭೇಟಿಗೆ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ನವೆಂಬರ್ 11ಕ್ಕೆ ಬಿಹಾರದಲ್ಲಿ 2ನೇ ಹಂತದ ಮತದಾನ ಅಂತ್ಯವಾಗಲಿದ್ದು, ಅಂದೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಅಧಿಕಾರ ಹಂಚಿಕೆ ಕುರಿತು ರಾಹುಲ್ ಗಾಂಧಿ ಜೊತೆ ಡಿಕೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಇದರ ಜೊತೆಗೆ ಮುಂದಿನ ರಾಜಕೀಯ ಭವಿಷ್ಯ ಕುರಿತು ಸಹ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸದ್ಯ ನವೆಂಬರ್ 11ರವರೆಗೂ ಮೌನದಿಂದ ಇರುವಂತೆ ತನ್ನ ಬೆಂಬಲಿಗರಿಗೆ ಡಿಕೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ಡಿಕೆ ದೆಹಲಿ ಪ್ರವಾಸ ಕುತೂಹಲ ಹೆಚ್ಚಿಸಿದೆ.
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

