ನವೆಂಬರ್ ಕ್ರಾಂತಿ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶಕ್ಕೆ ಡಿಕೆಶಿ ಶುಭ ಹಾರೈಕೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದರ ಬೆನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಈ ಬಣದ ರಾಜಕೀಯ ಚಟುವಟಿಕೆಗಳ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, (ನವೆಂಬರ್ 21): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದರ ಬೆನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಈ ಬಣದ ರಾಜಕೀಯ ಚಟುವಟಿಕೆಗಳ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ. ನಾಲ್ವರು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಬೇಕು. ಸಂಪುಟಕ್ಕೆ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಇದು ಎಂದು ಮಾರ್ಮಿಕವಾಗಿ ಹೇಳಿದರು.
ಇನ್ನು ಇದೇ ವೇಳೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆಂದು ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಶುಭಾಶಯ ಹೇಳುತ್ತೇನೆ. ಅವರಿಗೆ ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಈ ಮೂಲಕ ಸಿಎಂ ಆಗಿ ತಾವೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

