‘ಗಡಿಯಲ್ಲಿ ಶಾಂತಿ, ಸೌಹಾರ್ದತೆ ಅತ್ಯಗತ್ಯ’; ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ವಿದೇಶಾಂಗ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಗಡಿ ಪ್ರದೇಶದಲ್ಲಿ ಶಾಂತಿಯನ್ನು ಕಾಯ್ದುಕೊಳ್ಳುವ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. 2020ರ ಗಾಲ್ವಾನ್ ಕಣಿವೆ ಸಂಘರ್ಷ ಮತ್ತು ಪೂರ್ವ ಲಡಾಖ್‌ನಲ್ಲಿ ಉಂಟಾಗಿದ್ದ ಸೇನಾ ಬಿಕ್ಕಟ್ಟಿನ ನಂತರ ಬಾಂಧವ್ಯವನ್ನು ಸ್ಥಿರಗೊಳಿಸಲು ಎರಡೂ ದೇಶಗಳು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ ಈ ಉನ್ನತ ಮಟ್ಟದ ಮಾತುಕತೆಯು ಅತ್ಯಂತ ಮಹತ್ವ ಪಡೆದುಕೊಂಡಿದೆ.
ಬೀಜಿಂಗ್, ಆಗಸ್ಟ್ 25: ಭಾರತ ಮತ್ತು ಚೀನಾ ಗಡಿ ವಿಷಯಕ್ಕೆ ಸಂಬಂಧಿಸಿದಂತೆ 25ನೇ ಸುತ್ತಿನ ವಿಶೇಷ ಪ್ರತಿನಿಧಿಗಳ (SR) ಮಾತುಕತೆಯು ಪ್ರಸ್ತುತ ಬೀಜಿಂಗ್‌ನಲ್ಲಿ ನಡೆಯುತ್ತಿದ್ದು, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಈ ಚರ್ಚೆಯ ನಾಯಕತ್ವ ವಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರಿಕ್ಸ್ (BRICS) ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯ ಸಂದರ್ಭದಲ್ಲಿ ದೋವಲ್ ಮತ್ತು ವಾಂಗ್ ಯಿ ಜೂನ್‌ನಲ್ಲಿ ಭೇಟಿಯಾದ ನಂತರ ಈ ಹೊಸ ಸುತ್ತಿನ ಮಾತುಕತೆ ನಡೆಯುತ್ತಿದೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಗಡಿ ಪ್ರದೇಶದಲ್ಲಿ ಶಾಂತಿಯನ್ನು ಕಾಯ್ದುಕೊಳ್ಳುವ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. 2020ರ ಗಾಲ್ವಾನ್ ಕಣಿವೆ ಸಂಘರ್ಷ ಮತ್ತು ಪೂರ್ವ ಲಡಾಖ್‌ನಲ್ಲಿ ಉಂಟಾಗಿದ್ದ ಸೇನಾ ಬಿಕ್ಕಟ್ಟಿನ ನಂತರ ಬಾಂಧವ್ಯವನ್ನು ಸ್ಥಿರಗೊಳಿಸಲು ಎರಡೂ ದೇಶಗಳು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ ಈ ಉನ್ನತ ಮಟ್ಟದ ಮಾತುಕತೆಯು ಅತ್ಯಂತ ಮಹತ್ವ ಪಡೆದುಕೊಂಡಿದೆ.
ಗಡಿ ಮಾತುಕತೆಗೆ ಮುನ್ನ, ಅಜಿತ್ ದೋವಲ್ ಅವರು ಬೀಜಿಂಗ್‌ನಲ್ಲಿ ಚೀನಾದ ಉಪಾಧ್ಯಕ್ಷ ಹಾನ್ ಝೆಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಉಭಯ ನಾಯಕರು ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವ ಕುರಿತು ಹಾಗೂ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಸುಧಾರಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ