ಆಂಧ್ರಪ್ರದೇಶ: ಸಿಎಂ ಚಂದ್ರಬಾಬು ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಎನ್​ಎಸ್​ಜಿ ಕಮಾಂಡೋ

Updated on: Apr 20, 2026 | 2:36 PM

ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅಣ್ಣಾ ಕ್ಯಾಂಟೀನ್‌ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ ಸಮಯದಲ್ಲಿ ಅನಿರೀಕ್ಷಿತ ಘಟನೆಯೊಂದು ಸಂಭವಿಸಿತ್ತು. ಕಾರ್ಯಕ್ರಮದ ನಂತರ ಸಿಎಂ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಅವರ ಸುರಕ್ಷತಾ ತಂಡದ ಭಾಗವಾಗಿದ್ದ ಎನ್‌ಎಸ್‌ಜಿ ಕಮಾಂಡೋ ವಿಪರೀತ ಸೆಕೆಯಿಂದಾಗಿ ಕುಸಿದುಬಿದ್ದಿದ್ದಾರೆ. ಮಾಹಿತಿ ತಿಳಿದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರು. ತೀವ್ರ ಬಿಸಿಲಿನಿಂದಾಗಿ ಸುಸ್ತಾಗಿ ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆಂಧ್ರಪ್ರದೇಶ, ಏಪ್ರಿಲ್ 20: ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅನ್ನ ಕ್ಯಾಂಟೀನ್‌ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ ಸಮಯದಲ್ಲಿ ಅನಿರೀಕ್ಷಿತ ಘಟನೆಯೊಂದು ಸಂಭವಿಸಿತ್ತು. ಕಾರ್ಯಕ್ರಮದ ನಂತರ ಸಿಎಂ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಅವರ ಸುರಕ್ಷತಾ ತಂಡದ ಭಾಗವಾಗಿದ್ದ ಎನ್‌ಎಸ್‌ಜಿ ಕಮಾಂಡೋ ವಿಪರೀತ ಸೆಕೆಯಿಂದಾಗಿ ಕುಸಿದುಬಿದ್ದಿದ್ದಾರೆ. ಮಾಹಿತಿ ತಿಳಿದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರು. ತೀವ್ರ ಬಿಸಿಲಿನಿಂದಾಗಿ ಸುಸ್ತಾಗಿ ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More