ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

Updated on: May 17, 2026 | 6:52 AM

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಸಂಸ್ಥೆಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ನವದೆಹಲಿ, ಮೇ 17: NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ತನಿಖೆಯ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. 1998 ಬ್ಯಾಚ್‌ನ ಭಾರತೀಯ ಅಂಕಿಅಂಶ ಸೇವೆ (ISS) ಅಧಿಕಾರಿಯಾಗಿರುವ ಅನುಜಾ ಬಾಪಟ್ ಹಾಗೂ 2004 ಬ್ಯಾಚ್‌ನ ಐಆರ್‌ಎಸ್ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ಅಧಿಕಾರಿಯಾಗಿರುವ ರುಚಿತಾ ವಿಜ್ ಅವರನ್ನು ಎನ್‌ಟಿಎಯ ಜಂಟಿ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಗಾಗಿ ಎನ್‌ಟಿಎಯಲ್ಲಿ ಖಾಲಿ ಇದ್ದ ಉಪ ಕಾರ್ಯದರ್ಶಿ/ನಿರ್ದೇಶಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಜಂಟಿ ಕಾರ್ಯದರ್ಶಿ ಹುದ್ದೆಗಳ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಇದೇ ವೇಳೆ, 2013 ಬ್ಯಾಚ್‌ನ ಐಆರ್‌ಎಸ್ (ಆದಾಯ ತೆರಿಗೆ) ಅಧಿಕಾರಿ ಆಕಾಶ್ ಜೈನ್ ಹಾಗೂ 2013 ಬ್ಯಾಚ್‌ನ ಭಾರತೀಯ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ಸೇವೆ (IA&AS) ಅಧಿಕಾರಿ ಆದಿತ್ಯ ರಾಜೇಂದ್ರ ಭೋಜಗಢಿಯಾ ಅವರನ್ನು ಎನ್‌ಟಿಎಯ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More