ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​

Edited By: ವಿವೇಕ ಬಿರಾದಾರ

Updated on: Apr 29, 2025 | 7:44 PM

ರಬಕವಿ-ಬನಹಟ್ಟಿ ತಾಲೂಕಿನ ಜಗದಾಳದಲ್ಲಿ ಎನ್ಡಬ್ಲ್ಯುಕೆಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆದಿದೆ. ಬೈಕ್ ಸವಾರನಿಗೆ ನಿಧಾನವಾಗಿ ಹೋಗಲು ಹೇಳಿದ್ದಕ್ಕೆ ಈ ಘಟನೆ ನಡೆದಿದೆ. ಬೈಕ್ ಸವಾರ ತನ್ನ ತಂದೆಯನ್ನು ಕರೆಸಿಕೊಂಡು ಬಂದು ಹಲ್ಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ.

ಬಾಗಲಕೋಟೆ, ಏಪ್ರಿಲ್​ 29: ನಿಧಾನವಾಗಿ ಹೋಗಪ್ಪ ಎಂದು ಬುದ್ಧಿವಾದ ಹೇಳಿದಕ್ಕೆ ಎನ್​ಡಬ್ಲೂಕೆಎಸ್​ಆರ್​ಟಿಸಿ ಬಸ್​ ಚಾಲಕ ಮತ್ತು ನಿರ್ವಾಹಕನಿಗೆ ಕಟ್ಟಿಗೆಯಿಂದ ಹೊಡೆದಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಚಲಿಸುತ್ತಿದ್ದ NWKRTC ಬಸ್​ಗೆ ಬೈಕ್ ಸವಾರ ಅಡ್ಡ ಬಂದಿದ್ದರು. ಆಗ, ಬಸ್​ ಚಾಲಕ ನಿಧಾನವಾಗಿ ಹೋಗಪ್ಪ ಅಂತ ಬುದ್ದಿವಾದ ಹೇಳಿದ್ದಾರೆ. ಇಷ್ಟಕ್ಕೇ NWKRTC ಬಸ್ ಚಾಲಕನ ಜೊತೆ ಬೈಕ್​ ಸವಾರ ವಾಗ್ವಾದಕ್ಕೆ ಇಳಿದಿದ್ದಾನೆ. ಚಾಲಕನಿಗೆ ನಿಂದಿಸಿ, ಬಳಿಕ ತನ್ನ ತಂದೆಗೆ ಕರೆ ಮಾಡಿದ್ದಾನೆ. ಜಗದಾಳ ಬಳಿ ಬೊಲೆರೊ ವಾಹನದಲ್ಲಿ ಜನರನ್ನು ಕರೆತಂದು ಚಾಲಕ ಮತ್ತು ನಿರ್ವಾಹಕರ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ.

Published on: Apr 29, 2025 07:42 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More