ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್
ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ.
ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ.
ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್ ಅವರು ಚಾಲಕ ಮತ್ತು ನಿರ್ವಾಹಕರ ಸಂಪರ್ಕ ವಿವರಗಳನ್ನು ಒದಗಿಸಿದ್ದಾರೆ. ಕೂಡಲೇ ಅವರನ್ನು ಸಂಪರ್ಕಿಸಿದಾಗ, ಬ್ಯಾಗ್ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿ, ಮೇ 21ರಂದು ಬೆಳಿಗ್ಗೆ 10 ಗಂಟೆಗೆ ವಿಭಾಗೀಯ ಕಚೇರಿಗೆ ಬಂದು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರು ಸಮಯಕ್ಕೆ ಸರಿಯಾಗಿ ಬ್ಯಾಗ್‌ನ್ನು ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 22, 2026 01:00 PM
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್
ಕಾಂಗ್ರೆಸ್ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

