ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

Edited By:

Updated on: May 22, 2026 | 4:16 PM

ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ.

ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ.

ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್ ಅವರು ಚಾಲಕ ಮತ್ತು ನಿರ್ವಾಹಕರ ಸಂಪರ್ಕ ವಿವರಗಳನ್ನು ಒದಗಿಸಿದ್ದಾರೆ. ಕೂಡಲೇ ಅವರನ್ನು ಸಂಪರ್ಕಿಸಿದಾಗ, ಬ್ಯಾಗ್ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿ, ಮೇ 21ರಂದು ಬೆಳಿಗ್ಗೆ 10 ಗಂಟೆಗೆ ವಿಭಾಗೀಯ ಕಚೇರಿಗೆ ಬಂದು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರು ಸಮಯಕ್ಕೆ ಸರಿಯಾಗಿ ಬ್ಯಾಗ್‌ನ್ನು ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 22, 2026 01:00 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More