AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ: ಹೆಸರು ಬದಲಾವಣೆಗೆ ಆದೇಶ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ: ಹೆಸರು ಬದಲಾವಣೆಗೆ ಆದೇಶ

ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 12, 2026 | 5:29 PM

Share

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (NWKRTC) ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಆದೇಶಿಸಿದೆ. ಕಳೆದ ಹಲವು ವರ್ಷಗಳಿಂದ ಈ ಹೆಸರು ಬದಲಾವಣೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಬೇಡಿಕೆ ಇತ್ತು. ಹುಬ್ಬಳ್ಳಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈ ಸಂಸ್ಥೆ 6 ಜಿಲ್ಲೆಗಳಿಗೆ ಸೇವೆ ಒದಗಿಸುತ್ತದೆ. ಈ ಕ್ರಮದಿಂದ ಸಂತಸಗೊಂಡಿರುವ ಜನರು, ಸಂಸ್ಥೆಯ ಆರ್ಥಿಕ ಪುನಶ್ಚೇತನಕ್ಕೂ ಆಗ್ರಹಿಸಿದ್ದಾರೆ.

ಹುಬ್ಬಳ್ಳಿ, ನವೆಂಬರ್ 12: ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಿ ಕರ್ನಾಟಕ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ. ಈ ಹೆಸರು ಬದಲಾವಣೆಗೆ ಕಳೆದ ಅನೇಕ ವರ್ಷಗಳಿಂದ ಈ ಭಾಗದ ಜನರು ಮತ್ತು ಜನಪ್ರತಿನಿಧಿಗಳಿಂದ ನಿರಂತರ ಆಗ್ರಹವಿತ್ತು.

2021 ರಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಿದ ನಂತರ, ಸಾರಿಗೆ ಸಂಸ್ಥೆಗೂ ಕಿತ್ತೂರು ರಾಣಿ ಚೆನ್ನಮ್ಮನ ಹೆಸರಿಡಬೇಕೆಂಬ ಬೇಡಿಕೆ ಹೆಚ್ಚಾಗಿತ್ತು. ಈ ಹಿಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಬದಲಾಯಿಸಲಾಗಿತ್ತು.

NWKRTCಯು 1997ರ ನವೆಂಬರ್ 1 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರತ್ಯೇಕವಾಗಿ ರಚನೆಯಾಗಿತ್ತು. ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ ಸೇರಿ ಒಟ್ಟು ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಪ್ರತಿದಿನ 5,300ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತಿದ್ದು, ಲಕ್ಷಾಂತರ ಜನರಿಗೆ ಆಧಾರವಾಗಿದೆ. ಸರ್ಕಾರದ ಈ ನಿರ್ಧಾರದಿಂದ ಈ ಭಾಗದ ಜನರಲ್ಲಿ ಸಂತಸ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More