ಅಶ್ಲೀಲ ಪದ ಬಳಕೆ ವಿಚಾರ: ಸಿಟಿ ರವಿ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ; ಹೆಬ್ಬಾಳ್ಕರ್​

Updated on: Dec 24, 2024 | 1:00 PM

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಟಿ ರವಿ ಈ ಆರೋಪವನ್ನು ನಿರಾಕರಿಸಿದ್ದಾರೆ. ಪ್ರತಿಕ್ರಿಯೆಯಾಗಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಸಿಟಿ ರವಿಯವರಿಗೆ ಸವಾಲು ಹಾಕಿದ್ದಾರೆ. ಈ ಘಟನೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಗುರುವಾರ (ಡಿ.19) ರಂದು ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆರೋಪ ಮಾಡಿದ್ದರು. ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದರು. ಈ ವಿಚಾರ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಟಿವಿ9 ವಿಶೇಷ ಸಂದರ್ಶನದಲ್ಲಿ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಿ, ನೋಡೋಣ. ಬನ್ನಿ ಧರ್ಮಸ್ಥಳಕ್ಕೆ ಪ್ರಮಾಣ ಮಾಡಿ ಹೇಳಿ. ಧರ್ಮಸ್ಥಳಕ್ಕೆ ಬನ್ನಿ, ನಾನೂ ಕೂಡ ಬರುತ್ತೇನೆ ಎಂದು ಸಿಟಿ ರವಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More