Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ

ಅ.01ರ ಮಂಗಳವಾರವಾದ ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
|

Updated on: Oct 01, 2024 | 6:47 AM

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 1ರ ಮಂಗಳವಾರವಾದ ಇಂದು, ಚಂದ್ರನು ಕನ್ಯಾರಾಶಿಗೆ ಚಲಿಸುತ್ತಾನೆ. ಇದರಿಂದಾಗಿ ಚಂದ್ರ ಮತ್ತು ಗುರುವಿನ ಒಂಬತ್ತು ಮತ್ತು ಐದನೇ ಯೋಗವು ರೂಪುಗೊಳ್ಳುತ್ತದೆ. ಹಾಗಾದರೆ ಬನ್ನಿ ಇಂದಿನ (ಅಕ್ಟೋಬರ್ 1) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:21 ರಿಂದ ಸಂಜೆ 04:51, ಯಮಘಂಡ ಕಾಲ ಬೆಳಿಗ್ಗೆ 09:23ರಿಂದ 10:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:22 ರಿಂದ 01:52 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us