Nithya Bhavishya: ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ಇಂದು (ಅ.03) ಗುರುವಾರ. ಇಂದಿನಿಂದ 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಇಂದಿನಿಂದ (ಅ.03) ನವರಾತ್ರಿ ಹಬ್ಬದ ಸಂಭ್ರಮ ಶುರುವಾಗುತ್ತಿದೆ. ಈ ವರ್ಷದ ಶಾರದೀಯ ನವರಾತ್ರಿ ಹಬ್ಬವನ್ನ ಅಕ್ಟೋಬರ್ 3 ರಿಂದ ಆಚರಿಸಲಾಗುತ್ತದೆ. ಭಾಗವತ ಮತ್ತು ಮಾರ್ಕಂಡೇಯ ಪುರಾಣದ ಪ್ರಕಾರ, ನವರಾತ್ರಿಯ 9 ದಿನಗಳಲ್ಲಿ ದುರ್ಗಾ ದೇವಿಯ (Durga Devi) 9 ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಮೊದಲ ದಿನದಂದು ಕಲಶವನ್ನು ಸ್ಥಾಪಿಸಿ ದುರ್ಗಾದೇವಿಯನ್ನು ಆವಾಹನೆ ಮಾಡಿ ನಂತರ ನವರಾತ್ರಿಯ ಪೂಜೆಯನ್ನ ಆರಂಭಿಸಲಾಗುತ್ತದೆ. ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಚಿತ್ರಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:20, ಯಮಘಂಡ ಕಾಲ ಬೆಳಿಗ್ಗೆ 06:24ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:52 ರವರೆಗೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

