AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ

Nithya Bhavishya: ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ

ಆಯೇಷಾ ಬಾನು
|

Updated on: Oct 04, 2024 | 6:37 AM

Share

ಇಂದು (ಅ.04) ಶುಕ್ರವಾರ. 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 04ರ ಶುಕ್ರವಾರವಾದ ಇಂದು ನವರಾತ್ರಿ ಹಬ್ಬದ 2ನೇ ದಿನ. ಈ ವರ್ಷದ ಶಾರದೀಯ ನವರಾತ್ರಿ ಹಬ್ಬವನ್ನ ಅಕ್ಟೋಬರ್ 3 ರಿಂದ ಆಚರಿಸಲಾಗುತ್ತಿದೆ. ಭಾಗವತ ಮತ್ತು ಮಾರ್ಕಂಡೇಯ ಪುರಾಣದ ಪ್ರಕಾರ, ನವರಾತ್ರಿಯ 9 ದಿನಗಳಲ್ಲಿ ದುರ್ಗಾ ದೇವಿಯ (Durga Devi) 9 ರೂಪಗಳನ್ನು ಪೂಜಿಸಲಾಗುತ್ತದೆ. ಆಶ್ವಯುಜ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯಂದು ‘ಬ್ರಹ್ಮಚಾರಿಣಿ’ ಸ್ವರೂಪಳಾದ ದುರ್ಗಾ ಆರಾಧನೆ ಮಾಡಬೇಕು. ರಂಗೋಲಿಯಲ್ಲಿ ಅಷ್ಟ ದಳವನ್ನು ಬಿಡಿಸಿ, ಕಲಶ ಸ್ಥಾಪನೆಯನ್ನು ಮಾಡಿ. ಆ ಕಲಶದಲ್ಲಿ ಈ ಕೆಳಗಿನ ಶ್ಲೋಕದೊಂದಿಗೆ ಬ್ರಹ್ಮಚಾರಿಣಿ ದೇವಿಯನ್ನು ಧ್ಯಾನಿಸಬೇಕು. ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವೈಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:52 ರಿಂದ 12:21, ಯಮಘಂಡ ಕಾಲ ಮಧ್ಯಾಹ್ನ 03:20ರಿಂದ 04: 49ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:22 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More