Nithya Bhavishya: ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿಯ ಏಳನೇ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಬುಧವಾರ (ಅ.09) ನವರಾತ್ರಿಯ ಏಳನೇ ದಿನ ಕಾಲರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ. ಇಂದು ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:20 ರಿಂದ 01:49, ಯಮಘಂಡ ಕಾಲ ಬೆಳಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:20 ರವರೆಗೆ.
Published on: Oct 09, 2024 06:29 AM