ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ದುಷ್ಟರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ, ಸಿಎಂ
ಗೃಹ ಸಚಿವ ಜಿ ಪರಮೇಶ್ವರ್ ಅವರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರವ ಹಲ್ಲೆಗೊಳಗಾದ ವಂಟಿಮೂರಿ ಮಹಿಳೆಯನ್ನು ಭೇಟಿ ಮಾಡಿ ಹಲ್ಲೆ ನಡೆಸಿದ ಜನರ ವಿರುದ್ಧ ಕ್ರಮ ಜರುಗಿಸುವ ಭರವಸೆಯನ್ನು ಅವರ ಕುಟುಂಬಕ್ಕೆ ನೀಡಿದ್ದಾರೆ. ಯುವಕ ಯುವತಿಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಬೆಳಗಾವಿ ಪೊಲೀಸ್ ಪೊಲೀಸ್ ಕಮೀಶನರ್ ಎಸ್ ಎನ್ ಸಿದ್ದರಾಮಪ್ಪ ಹೇಳಿದ್ದಾರೆ.
ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಲ್ಲಿ ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಎರಡನೇ ವಾರದ ಕಾರ್ಯಕಲಾಪಗಳಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿ ಸಾಂಬ್ರಾ ವಿಮಾನ ನಿಲ್ದಾಣದ (Sambra airport) ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಸರ್ಕಾರವೇ ಬೆಳಗಾವಿಯಲ್ಲಿದ್ದರೂ (Belagavi) ನಗರದಿಂದ ಕೆಲವೇ ಕಿಮೀಗಳಷ್ಟು ದೂರ ಅಮಾನವೀಯ ಘಟನೆಯೊಂದು ನಡೆದಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಕೇವಲ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಆಗಿರುವುದಿಲ್ಲ, ಇಡೀ ರಾಜ್ಯದಲ್ಲಿ ಅದು ಕೆಲಸ ಮಾಡುತ್ತಿರುತ್ತದೆ ಎಂದು ಹೇಳಿದರು. ವಂಟಮೂರಿಯಲ್ಲಿ ನಡೆದ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡೋದಿಲ್ಲ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಅಧಿವೇಶನ ಮುಗಿದ ಬಳಿಕ ಸಮಾಜದ ಮುಖಂಡರು ಮತ್ತು ಸ್ವಾಮೀಜಿಗಳ ಜೊತೆ ಚರ್ಚೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

