LS Polls; ಲೋಕ ಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಗೀತಕ್ಕನಿಗೆ ಟಿಕೆಟ್ ನೀಡುವ ವಿಚಾರ ವರಿಷ್ಠರ ವಿವೇಚನಗೆ ಬಿಟ್ಟಿದ್ದು: ಮಧು ಬಂಗಾರಪ್ಪ, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jun 27, 2023 | 9:02 PM

ಗೀತಾ ಅವರಿಗೆ ಶಿವಮೊಗ್ಗದಿಂದ ಟಿಕೆಟ್ ನೀಡಬೇಕೆಂದು ರಾಜ್ಯದ ನಾಯಕರು ಒಲವು ತೋರಿದ್ದಾರೆ ಮತ್ತು ಗೀತಾ ಸಹ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಶಿವಮೊಗ್ಗ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಮ್ಮ ಸಹೋದರಿ ಮತ್ತು ಚಿತ್ರನಟ ಶಿವರಾಜ್ ಕುಮಾರ್ ಧರ್ಮಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಅವರಿಗೆ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವ ಸಾಧ್ಯತೆ ಬಗ್ಗೆ ಯಾವುದನ್ನೂ ಸ್ಪಷ್ಟವಾಗಿ ಹೇಳಲಿಲ್ಲ. ಗೀತಾ ಕೆಲ ತಿಂಗಳ ಹಿಂದೆ ಪಕ್ಷ ಸೇರಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಬಗ್ಗೆ ತಾನು ಮಾತಾಡುವುದು ಸರಿಯಲ್ಲ, ಅದನ್ನು ಪಕ್ಷದ ವರಿಷ್ಠರು ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿಯಾಗಿರುವ ರಂದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ನಿರ್ಧರಿಸುತ್ತಾರೆ ಎಂದು ಸಚಿವ ಹೇಳಿದರು. ಆದರೆ ಅಸಲು ಸಂಗತಿಯೇನೆಂದರೆ, ಗೀತಾ ಅವರಿಗೆ ಶಿವಮೊಗ್ಗದಿಂದ ಟಿಕೆಟ್ ನೀಡಬೇಕೆಂದು ರಾಜ್ಯದ ಬಹುತೇಕ ನಾಯಕರು ಒಲವು ತೋರಿದ್ದಾರೆ ಮತ್ತು ಗೀತಾ ಸಹ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.