ಕೋಲಾರದ ಚಿಕ್ಕತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಗೊತ್ತಾ?
ಚಿಕ್ಕತಿರುಪತಿಯಲ್ಲಿರುವ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸವನ್ನು ಬಿಂಬಿಸುತ್ತದೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸೆಲ್ವರಾಜ್ ಹುಂಡಿ ಹಣ ಎಣಿಕೆ ಕಾರ್ಯ ನಡೆಯುತ್ತಿದ್ದಾಗ ಹಾಜರಿದ್ದರು. ಶಕ್ತಿ ಯೋಜನೆ ಶುರುವಾದಾಗಿನಿಂದ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡುವ ಸಂಖ್ಯೆ ಹೆಚ್ಚಿದೆ.
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿಯಲ್ಲಿರುವ ಪ್ರಸನ್ನ ವೆಂಕಟರಮಣ ದೇವಸ್ಥಾನ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾರಣ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಅಪಾರ. ಮೂರು ತಿಂಗಳಿಗೊಮ್ಮೆ ಇಲ್ಲಿ ಹುಂಡಿಯಲ್ಲಿ ಸಂಗ್ರಹವಾಗುವ ಹಣವನ್ನು ಹೊರತೆಗೆದು ಎಣಿಸಲಾಗುತ್ತದೆ. ಕಳೆದ ಮೂರು ತಿಂಗಳಲ್ಲಿ ಸಂಗ್ರಹವಾಗಿರುವ ಹಣ ₹ 76,79,245. ಕಾಣಿಕೆ ಎಣಿಕೆ ಕಾರ್ಯ ತಡರಾತ್ರಿವರೆಗೂ ನಡೆದಿದೆ ಎಂದು ನಮ್ಮ ಕೋಲಾರ ವರದಿಗಾರ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮೈಸೂರು: ನಂಜುಂಡನ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ; ಎಷ್ಟು ಕೋಟಿ ಸಂಗ್ರಹವಾಗಿದೆ ಗೊತ್ತಾ?
Latest Videos