ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಇಲಾಖಾ ತನಿಖೆಗೆ ಆದೇಶ: ಆರ್ ಬಿ ತಿಮ್ಮಾಪುರ, ಅಬಕಾರಿ ಸಚಿವ
ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಎಲ್ಲ ಸರ್ಕಾರಗಳ ಅವಧಿಯಲ್ಲಿ ಮಾತು ಕೇಳಿಬರುತ್ತಿವೆ, ಭ್ರಷ್ಟ ಅಧಿಕಾರಿಗಳು ಇಲಾಖೆಯಲ್ಲಿರೋದು ಸುಳ್ಳಲ್ಲ, ಅದರೆ ಪರವಾನಿಗೆಗಾಗಿ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ತಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಚಿವ ತಿಮ್ಮಾಪುರ ಹೇಳಿದರು.
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಯಥೇಚ್ಛವಾಗಿ ಮೇಯಲು ಅವಕಾಶವಿರೋದು ಅಬ್ಕಾರಿ ಇಲಾಖೆಯಲ್ಲಿ. ಮಂಡ್ಯದ ಚಂದೂಪೂರನಲ್ಲಿ ಬಾರ್ ಅಂಡ್ ರೆಸ್ಟುರಾಂಟ್ ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ ಪುನೀತ್ ಹೆಸರಿನ ವ್ಯಕ್ತಿ ಅಬ್ಕಾರಿ ಡಿಸಿ ರವಿಶಂಕರ್ ಎನ್ನುವವರು ₹ 40 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದರೆಂದು ಸಾಕ್ಷಿ ಸಮೇತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ವಿಷಯದ ಬಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ರವಿಶಂಕರ್ ಮತ್ತು ಇನ್ಸ್ಪೆಕ್ಟರ್ ಶಿವಶಂಕರ್ ವಿರುದ್ಧ ಕ್ರಮ ಜರುಗಿಸಲಾಗುವುದು ಮತ್ತು ಇಲಾಖಾ ತನಿಖೆಗೆ ಆದೇಶ ನೀಡಲಾಗುವುದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಆರ್ಬಿ ತಿಮ್ಮಾಪುರ ಆಪ್ತನಿಂದ ವಂಚನೆ ಆರೋಪ: ರಾಜ್ಯಪಾಲರಿಗೆ ದೂರು ನೀಡಿದ್ದೇ ಅಬಕಾರಿ ಇಲಾಖೆಯ ಅಧಿಕಾರಿ!
Latest Videos