ಎಸ್ಐಟಿ ಕಛೇರಿಯಿಂದ ರೇವಣ್ಣನನ್ನ ವೈದ್ಯಕೀಯ ತಪಾಸಣೆಗೆ ಕರೆತಂದ ಅಧಿಕಾರಿಗಳು
ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ(HD Revanna) ಅವರನ್ನು ನಿನ್ನೆ(ಮೇ.04) ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ರೇವಣ್ಣ, ‘ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ಈ ಕುರಿತು ಯಾವುದೇ ಪುರಾವೆ ಇಲ್ಲ, ದುರುದ್ದೇಶದಿಂದ ಅರೆಸ್ಟ್ ಮಾಡಿದ್ದಾರೆ ಎಂದು ಎಸ್ಐಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮೇ.05: ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ(HD Revanna) ಅವರನ್ನು ನಿನ್ನೆ(ಮೇ.04) ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ರೇವಣ್ಣ, ‘ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ಈ ಕುರಿತು ಯಾವುದೇ ಪುರಾವೆ ಇಲ್ಲ, ದುರುದ್ದೇಶದಿಂದ ಅರೆಸ್ಟ್ ಮಾಡಿದ್ದಾರೆ ಎಂದು ಎಸ್ಐಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನನ್ನ 40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ಆಮೇಲೆ ಎರಡನೇ ತಾರೀಖಿನಲ್ಲಿ ಘಟನೆ ಕುರಿತು ಯಾವುದೇ ಪುರಾವೆ ಕೂಡ ಸಿಕ್ಕಿಲ್ಲ. ನಮ್ಮ ಕ್ಯಾಮರಾದಲ್ಲಿ ಆಡಿಯೋ ಕ್ಯಾಚ್ ಆಗಿದೆ. ಇದನ್ನು ಎದುರಿಸುವ ಶಕ್ತಿಯಿದೆ, ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.
ಇನ್ನು ಘಟನೆ ಸಂಬಂಧ ಇಂದು(ಮೇ.05) ಸಂಜೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಗೆ ಸಿಗ್ನಲ್ಫ್ರೀ ರಸ್ತೆಯಲ್ಲಿ ಭದ್ರತೆ ನಡುವೆ SIT ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಕರೆತಂದಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ