ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಕಾರನ್ನು ಇಂಚಿಂಚೂ ಚೆಕ್ ಮಾಡಿದ ಅಧಿಕಾರಿಗಳು
ಚುನಾವಣಾ ಪ್ರಚಾರ ಸಭೆ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಇಂದು ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಇಳಿಯುತ್ತಿದ್ದಂತೆ ಚುನಾವಣಾ ಆಯೋಗದ ಸಿಬ್ಬಂದಿಗಳು ಪರಿಶೀಲನೆ ಮಾಡಿದ್ದಾರೆ. ಬಳಿಕ ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಾರನ್ನು ಅಧಿಕಾರಿಗಳು ಇಂಚಿಂಚೂ ಚೆಕ್ ಮಾಡಿದ್ದಾರೆ.
ಚಿತ್ರದುರ್ಗ, ಮಾರ್ಚ್ 04: ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭೆ ಚುನಾವಣಾ ಕಾವು ಜಾಸ್ತಿ ಆಗಿದೆ. ಹೀಗಾಗಿ ಇಂದು ನಗರದಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ್ದಾರೆ. ಇತ್ತ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಇಳಿಯುತ್ತಿದ್ದಂತೆ ಚುನಾವಣಾ ಆಯೋಗದ ಸಿಬ್ಬಂದಿಗಳು ಪರಿಶೀಲನೆ ಮಾಡಿದ್ದಾರೆ. ಬಳಿಕ ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಾರನ್ನು ಅಧಿಕಾರಿಗಳು ಇಂಚಿಂಚೂ ಚೆಕ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರಿಶೀಲನೆ ಮಾಡಲಾಗುತ್ತಿದೆ. ಇತ್ತಿಚೇಗೆ ಕೋಲಾರದಲ್ಲಿ ಕೂಡ ಸಿದ್ದರಾಮಯ್ಯ ಅವರ ಕಾರನ್ನು ಚೆಕ್ ಮಾಡಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
