ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಕಾರನ್ನು ಇಂಚಿಂಚೂ ಚೆಕ್ ಮಾಡಿದ ಅಧಿಕಾರಿಗಳು

Edited By:

Updated on: Apr 04, 2024 | 4:15 PM

ಚುನಾವಣಾ ಪ್ರಚಾರ ಸಭೆ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಇಂದು ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಇಳಿಯುತ್ತಿದ್ದಂತೆ ಚುನಾವಣಾ ಆಯೋಗದ ಸಿಬ್ಬಂದಿಗಳು ಪರಿಶೀಲನೆ ಮಾಡಿದ್ದಾರೆ. ಬಳಿಕ ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಾರನ್ನು ಅಧಿಕಾರಿಗಳು ಇಂಚಿಂಚೂ ಚೆಕ್ ಮಾಡಿದ್ದಾರೆ.

ಚಿತ್ರದುರ್ಗ‌, ಮಾರ್ಚ್​​ 04: ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭೆ ಚುನಾವಣಾ ಕಾವು ಜಾಸ್ತಿ ಆಗಿದೆ. ಹೀಗಾಗಿ ಇಂದು ನಗರದಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ್ದಾರೆ. ಇತ್ತ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಇಳಿಯುತ್ತಿದ್ದಂತೆ ಚುನಾವಣಾ ಆಯೋಗದ ಸಿಬ್ಬಂದಿಗಳು ಪರಿಶೀಲನೆ ಮಾಡಿದ್ದಾರೆ. ಬಳಿಕ ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಾರನ್ನು ಅಧಿಕಾರಿಗಳು ಇಂಚಿಂಚೂ ಚೆಕ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರಿಶೀಲನೆ ಮಾಡಲಾಗುತ್ತಿದೆ. ಇತ್ತಿಚೇಗೆ ಕೋಲಾರದಲ್ಲಿ ಕೂಡ ಸಿದ್ದರಾಮಯ್ಯ ಅವರ ಕಾರನ್ನು ಚೆಕ್​ ಮಾಡಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More